ಉಪಚುನಾವಣೆ ಸಮರ ಎರಡು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ
ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿವಾಗಿದ್ದು, ಮೊದಲ ಹಂತದ ಮತಎಣಿಕೆಯಲ್ಲಿ ಎರಡೂ ಕ್ಷೇತ್ರದಲ್ಲಿಯೂ ಬಿಜೆಪಿ ಮುನ್ನಡೆಯಲ್ಲಿದೆ. ಶಿರಾ ಕ್ಷೇತ್ರದ ಮತ ಎಣಿಕೆ ತುಮಕೂರಿನ ಸರ್ಕಾರಿ ಪಾಲಿಟೆಕ್ನ್ ಕಾಲೇಜಿನಲ್ಲಿ ನಡೆಯುತ್ತಿದ್ದರೆ, ಆರ್.ಆರ್.ನಗರದ ಮತ ಎಣಿಕೆ ಕಾರ್ಯ ಜ್ಞಾನಾಕ್ಷಿ ವಿದ್ಯಾ ನಿಕೇತನ್ ಶಾಲೆಯಲ್ಲಿ ನಡೆಯುತ್ತಿದೆ.
ಸದ್ಯ ಆರ್.ಆರ್.ನಗರ ಕ್ಷೇತ್ರದಲ್ಲಿ ಮೂರು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು, ಮುನಿರತ್ನ ಅವರು 6418 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ 15,110 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ಅವರಿಗೆ 8,692 ಮತಗಳು ಲಭಿಸಿದೆ.
ಇನ್ನು ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾಲ್ಕನೆ ಸುತ್ತಿನಲ್ಲೂ 1,519 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 11,770 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ 10,251 ಮತಗಳು, ಜೆಡಿಎಸ್ ಅಭ್ಯರ್ಥಿ 6,614 ಮತಗಳನ್ನು ಗಳಿಸಿದ್ದಾರೆ.
Comments
Post a Comment