ಗ್ರಾಮ ಪಂಚಾಯಿತಿ ಚುನಾವಣೆಗೆ ಸಜ್ಜಾಗಿ ಒಗ್ಗಟ್ಟಿನ ಮಂತ್ರ ಪಠಿಸಿ ಸಂಸದ ಡಿಕೆ ಸುರೇಶ್ ಕರೆ..!
ಕುಣಿಗಲ್ : ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ವೈ .ಕೆ ರಾಮಯ್ಯ ನವರ ತೋಟದಲ್ಲಿ ಆಯೋಜಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಶಾಸಕ
ಡಾ||ರಂಗನಾಥ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಂಗನಾಥ್ ಕಾರ್ಯಕರ್ತರು ಪಂಚಾಯಿತಿ ಚುನಾವಣೆಯಲ್ಲಿ ಈಗಾಗಲೇ ಗ್ರಾಮದಲ್ಲಿ ಹೆಚ್ಚಿನ ಹುಮ್ಮಸ್ಸು ತೋರುತ್ತಿದು ನಮ್ಮೆಲ್ಲ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು ಹಾಗೆಯೇ ಪ್ರತಿ ಗ್ರಾಮದಲ್ಲೂ ಈಗಾಗಲೇ ಆಕಾಂಕ್ಷಿಗಳು ಸಾಕಷ್ಟು ಜನರು ಇದು .
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ಡಾ||ರಂಗನಾಥ.
ಸಂಸದ ಡಿಕೆ ಸುರೇಶ್ ಮಾತನಾಡಿ ಕಾರ್ಯಕರ್ತರು ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಶೇಕಡ 50ರಷ್ಟು ಮೀಸಲಾತಿ ಮಹಿಳೆಯರಿಗೂ ಕೂಡ ಇರುವ ಸಂದರ್ಭದಲ್ಲಿ ಈ ಬಾರಿ ಹೆಚ್ಚಿನ ರೀತಿಯಲ್ಲಿ ವಿದ್ಯಾವಂತ ಯುವಕ ಯುವತಿಯರಿಗೆ ಆದ್ಯತೆಯನ್ನು ನೀಡಬೇಕು. ಗ್ರಾಮದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಬರದಂತೆ ಎಚ್ಚರವಹಿಸಿ ಎಲ್ಲರೂ ಕೂಡ ಒಗ್ಗಟ್ಟಿನಲ್ಲಿ ಚುನಾವಣೆಯನ್ನು ಎದುರಿಸಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು ಹಾಗೆಯೇ ತಾಲೂಕಿಗೆ ಹೇಮಾವತಿ ನೀರಿನ ವಿಚಾರವಾಗಿ ಅನ್ಯಾಯವಾಗುತ್ತಿದೆ ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವಂತೆ ತಾಲೂಕಿನ ಎಲ್ಲಾ ಜನತೆಯ ಪಕ್ಷಾತೀತವಾಗಿ ನಮ್ಮೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸದಸ್ಯರು , ಬ್ಲಾಕ್ ಕಾಂಗ್ರೆಸ್ ಸದಸ್ಯರು , ಯುವ ಕಾಂಗ್ರೆಸ್ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಜರಿದ್ದರು.
Comments
Post a Comment