ಬಂದ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಬೆಂಕಿಯಿಟ್ಟ ಕಿಚ್ಚ ಹೊರಹಾಕಿದ ಕುಣಿಗಲ್ ರೈತರು..!
ಕುಣಿಗಲ್ : ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (SKM) ಭಾರತದಾದ್ಯಂತ ಬಂದ್ಗೆ ಕರೆ ನೀಡಿತ್ತು. ಬಂದ್ ಕರೆಕೊಟ್ಟ ಹಿನ್ನೆಲೆಯಲ್ಲಿ ತಾಲೂಕಿನ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ‘ಭಾರತ್ ಬಂದ್’ ತಾಲೂಕಿನಲ್ಲಿ ಸಂಪೂರ್ಣ ಯಶಸ್ವಿಯಾಯಿತು.
ತಾಲೂಕಿನಲ್ಲಿ ಕೆಲ ತೆರೆದಿದ್ದ ಅಂಗಡಿ-ಮುಂಗಟ್ಟುಗಳನ್ನು ನೂರಾರು ರೈತರ ಸರಿ ಸಂಪೂರ್ಣ ಮುಚ್ಚಿಸುವಲ್ಲಿ ಯಶಸ್ವಿಯಾದರು ರೈತರ ಕರೆಗೆ ಓಗೊಟ್ಟು ಕೆಲ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು.
ತಾಲೂಕು ಅಧ್ಯಕ್ಷ ಅನಿಲ್ ರವರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿಯವರ ಅಣಕು ಶವಯಾತ್ರೆಯನ್ನು ನಡೆಸಿ ನೂರಾರು ರೈತರ ಸಮ್ಮುಖದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಧಿಕಾರಗಳನ್ನು ಕೂಗುತ ಹುಚ್ಚು ಮಾಸ್ತಿ ಗೌಡರ ವೃತ್ತದ ಬಳಿ ಪ್ರಧಾನಿ ನರೇಂದ್ರ ಮೋದಿಯವರ ಹಣಕು ಶವಕ್ಕೆ ಬೆಂಕಿ ಹಚ್ಚುವ ಮೂಲಕ ತಮ್ಮ ಕಿಚ್ಚನ್ನು ಹೊರಹಾಕಿದರು.
Comments
Post a Comment